
ಲೈವ್ ಟಿವಿ ನ್ಯೂಸ್

ದಿನಾಂಕ : 15-09-2025
ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ : ಆಸ್ಪತ್ರೆಗೆ ದಾಖಲು
ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ :ದಾವಣಗೆರೆ
ಒಟ್ಟು ಓದುಗರ ಸಂಖ್ಯೆ : 12+
ದಾವಣಗೆರೆ ಹೊರವಲಯದ ಜಿನ್ನೆಸಿಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರನೊಬ್ಬನನ್ನು ಆಸ್ಪತ್ರೆಗೆ ಸೇರಿಸಲಾಯಿತು. ದಾವಣಗೆರೆ ತಾಲ್ಲೂಕಿನ ಅಮೃತ ನಗರದ ಮಂಜು ಎಂಬ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು.
ಬೈಕ್ ಸವಾರ ತೀವ್ರವಾಗಿ ಗಾಯ ಗೊಂಡು ರಸ್ತೆ ಪಕ್ಕದಲ್ಲಿ ಬಿದ್ದಿದ್ದನ್ನು ಗಮನಿಸಿದ ಗಣಿ ಮತ್ತು ಭೂ ವಿಜ್ಞಾನ ಮತ್ತುತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಎಸ್ ಎಸ್ ಮಲ್ಲಿಕಾರ್ಜುನ್ ರವರು ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ ಮೇರೆಗೆ ಬೆಂಗವಾಲು ವಾಹನದಲ್ಲಿ ಎಆರ್ಎಸ್ಐ ದಾದಾಪೀರ್ ಮತ್ತು ಅಂಗರಕ್ಷಕ ನಟರಾಜ್ ಅವರು ಗಾಯಾಳು ಮಂಜು ಅವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ಕೊಡಿಸಿದರು. ಚಿಕಿತ್ಸೆ ನಂತರ ಗಾಯಾಳು ಮಂಜು ಜೊತೆಗೆ ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















