
ಲೈವ್ ಟಿವಿ ನ್ಯೂಸ್

ದಿನಾಂಕ : 16-09-2025
ರಾಜ್ಯದಲ್ಲಿ ನಡೆಯುವ ಜಿ.ಪಂ, ತಾ.ಪಂ. ಚುನಾವಣೆಯಲ್ಲಿ ಸ್ಪರ್ಧಿ ಸುವುದಾಗಿ ಘೋಷಣೆ ಲೋಕ ಜನಶಕ್ತಿ ಪಕ್ಷ
ವರದಿಗಾರರು : ಬಸವರಾಜ ಪೂಜಾರಿ
ವರದಿ ಸ್ಥಳ :ಬೀದರ
ಒಟ್ಟು ಓದುಗರ ಸಂಖ್ಯೆ : 22+
ಬೆಂಗಳೂರಿನಲ್ಲಿ ಲೋಕ ಜನಶಕ್ತಿ ಪಕ್ಷ(ರಾಮ ವಿಲಾಸ್ ಪಾಸ್ವಾನ್)ದ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ನಡೆಯಿತು. ಜಿ.ಪಂ, ತಾ.ಪಂ. ಚುನಾವಣೆ: ಲೋಕ ಜನಶಕ್ತಿ ಪಕ್ಷ ಸ್ಪರ್ಧೆ: ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಲೋಕ ಜನಶಕ್ತಿ ಪಕ್ಷ (ರಾಮ ವಿಲಾಸ್ ಪಾಸ್ವಾನ್) ನಿರ್ಧರಿಸಿದೆ ಎಂದು ಜಿಲ್ಲೆಯವರೇ ಆದ ಪಕ್ಷದ ರಾಜ್ಯ ಉಪಾಧ್ಯಕ್ಷ ನಾಗಶೆಟ್ಟಿ ಪಾಟೀಲ ಸುಂಕನಾಳ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈಚೆಗೆ ನಡೆದ ಪಕ್ಷದ ರಾಜ್ಯ ಹಾಗೂ ಜಿಲ್ಲಾ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷ ಎಂ.ಎಸ್. ಜಗನ್ನಾಥ ಈ ವಿಷಯ ಪ್ರಕಟಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಸಂಸ್ಥಾಪಕ ಅಧ್ಯಕ್ಷ ರಾಮ ವಿಲಾಸ್ ಪಾಸ್ವಾನ್ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರ ಜನಪರ ಕಾರ್ಯಗಳಿಂದಾಗಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಥಾವರ್ಸಿಂಗ್ ರಾಠೋಡ್, ಯುವ ಘಟಕದ ಅಧ್ಯಕ್ಷ ಕೃತಿಕಾ ಹೆಗಡೆ, ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ವಿಜಯಕುಮಾರ, ಕಾರ್ಮಿಕ ಘಟಕದ ಅಧ್ಯಕ್ಷ ವಿಜಯಕುಮಾರ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ಕುಲಕರ್ಣಿ, ಉಪಾಧ್ಯಕ್ಷ ಎಂ.ಡಿ. ಶಾಕೀರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾನ್ ನಾಗೂರಕರ್, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಜಗನ್ನಾಥ ಕೈಕಡೆ ಗಾದಗಿ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















