ವರದಿಗಾರರು :
ಕಿಶೋರ್ ಎ ಸಿ ||
ಸ್ಥಳ :
ಕೃಷ್ಣರಾಜಪೇಟೆ
ವರದಿ ದಿನಾಂಕ :
27-10-2025
ರಮೇಶ್ ಕತ್ತಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಕೆ.ಆರ್. ಪೇಟೆ: ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮಾಜದ ಬಗ್ಗೆ ಮಾಡಿದ ಅವಹೇಳನಕಾರಿ ಹೇಳಿಕೆ ಕುರಿತು ಕೆ.ಆರ್. ಪೇಟೆ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು. ಸಂಘದ ಅಧ್ಯಕ್ಷ ಎಂ.ಆರ್. ರಾಜನಾಯಕ ಅವರು ಟೌನ್ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕರಾದ ಸುಮಾರಾಣಿ ಅವರಿಗೆ ದೂರು ನೀಡಿ, ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಧಾನ ಕಾರ್ಯದರ್ಶಿ ರಾಜು ಜಿ.ಪಿ. ಅವರು ಹೇಳುವಂತೆ, ಅಕ್ಟೋಬರ್ 19 ರಂದು ಬೆಳಗಾವಿ ಜಿಲ್ಲೆ ಕೆಬಿ ಮೆಡಲ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ, ರಮೇಶ್ ಕತ್ತಿ ವಾಲ್ಮೀಕಿ ಸಮಾಜದವರನ್ನು ಅವಾಚ್ಯ ಶಬ್ದಗಳಿಂದ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆಯಿಂದ ರಾಜ್ಯದ ಸುಮಾರು 75 ಲಕ್ಷ ವಾಲ್ಮೀಕಿ ಜನರ ಮನಸ್ಸಿಗೆ ನೋವುಂಟಾಗಿದೆ ಎಂದು ಅವರು ಹೇಳಿದರು.
