ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
25-10-2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ, ಕೈದಿಗಳಿಗೆ ರಾಜಾತಿತ್ಯ ಮುಂದುವರೆದಿದೆ . ಸಜಾ ಬಂದಿ ಒಬ್ಬರ ಪತ್ನಿ ಜೈಲೊಳಗೆ ಭೇಟಿ ನೀಡಿ ಪತಿ-ಪತ್ನಿ ಒಟ್ಟಿಗೆ ಕುಳಿತು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮಾರಪ್ಪ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸಾದಿಕ್ ಅಹಮದ್ ಗೆ ಈ ರಾಜಾತಿತ್ಯ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಾಧಿಕ್ ಐದಾರು ಬಾರಿ ಪತ್ನಿಯನ್ನು ಜೈಲಿಗೆ ಕರೆಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
