ವರದಿಗಾರರು :
ಹರೀಶ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
26-10-2025
ಬಿಸಿಎಂಡಿಕೆ ಶಿವಕುಮಾರ್ ದಿಡೀರ್ ದೆಹಲಿ ಪ್ರಯಾಣ: ನಾಯಕತ್ವ ಬದಲಾವಣೆ ಚರ್ಚೆ?
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಕುರಿತು ಭಾರಿ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಂಜೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದು ಬಳಿಕ ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗುವ ನಿರೀಕ್ಷೆ ಇದೆ, ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಅವರ ಈ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಕೆರಳಿಸಿದೆ
