ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
05-11-2025
ತುಮಕೂರು: ಲಂಚ ಸ್ವೀಕಾರದ ವೇಳೆ ಗ್ರಾಮ ಆಡಳಿತಾಧಿಕಾರಿ ಸಿಕ್ಕಿಬಿದ್ದರು
ತುಮಕೂರು, ನ. 5: ಜಮೀನಿನ ಖಾತೆ ಬದಲಾವಣೆಗಾಗಿ ₹10,000 ಲಂಚ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಿ. ಯೋಗೀಶ್ ತಮ್ಮ ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನು ತಮ್ಮ ತಂದೆಯ ಹೆಸರಿಗೆ ಖಾತೆ ಬದಲಾವಣೆ ಮಾಡಿಸಲು ಮಂಜುನಾಥರನ್ನು ಸಂಪರ್ಕಿಸಿದ್ದರು. ಈ ಕೆಲಸಕ್ಕಾಗಿ ಮಂಜುನಾಥರು ಮೊದಲಿಗೆ ₹10,000 ಲಂಚ ಪಡೆದಿದ್ದು, ಬಳಿಕ ಮತ್ತೊಮ್ಮೆ ಅದೇ ಪ್ರಮಾಣದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಲಂಚ ನೀಡಲು ಇಷ್ಟವಿಲ್ಲದ ಯೋಗೀಶ್ ಅವರು ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಉರುಲು ಬಲೆ ಹಾಕಿದ ಪೊಲೀಸರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಊರ್ಡಿಗೆರೆ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಹತ್ತಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಮಂಜುನಾಥರನ್ನು ಬಂಧಿಸಿದರು. ಕಾರ್ಯಾಚರಣೆ ಲೋಕಾಯುಕ್ತ ಡಿವೈಎಸ್‌ಪಿ ಕೆ.ಎಂ. ಸಂತೋಷ್ ಅವರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳು ಬಿ. ಮೊಹಮ್ಮದ್ ಸಲೀಂ, ಕೆ. ಸುರೇಶ್, ಶಿವರುದ್ರಪ್ಪ ಮೇಟಿ ಮತ್ತು ಟಿ. ರಾಜು ಅವರ ತಂಡದಿಂದ ನಡೆಸಲಾಯಿತು ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ವಿ. ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
