ವರದಿಗಾರರು :
ನಾಗಭೂಷಣ್ ಕೆ ||
ಸ್ಥಳ :
ತುಮಕೂರು
ವರದಿ ದಿನಾಂಕ :
27-10-2025
ಹುಲಿ ದಾಳಿಗೆ ವ್ಯಕ್ತಿ ಬಲಿ: ಸಚಿವ ಈಶ್ವರ ಖಂಡ್ರೆ ಸಂತಾಪ
ಹುಲಿ ದಾಳಿಗೆ ವ್ಯಕ್ತಿ ಬಲಿ: ಸಚಿವ ಈಶ್ವರ ಖಂಡ್ರೆ ಸಂತಾಪ ಸರಗೂರು, ಅ.26: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಮುಳ್ಳೂರು ಹತ್ತಿರದ ಬೆಣ್ಣೆಗೆರೆ ಅರಣ್ಯದಲ್ಲಿ ಹುಲಿ ದಾಳಿಗೆ ರಾಜಶೇಖರ (54) ಎಂಬುವವರು ಬಲಿಯಾಗಿದ್ದಾರೆ. ಈ ಘಟನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆಘಾತ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ. ಹುಲಿ ಸೆರೆಗೆ ತುರ್ತು ಕ್ರಮ ಕೈಗೊಳ್ಳಲು ಹಾಗೂ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ.
