ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
01-11-2025
ಬೆಂಗಳೂರು: ಲೈಂಗಿಕ ಕಿರುಕುಳ, ಬೆಂಗಳೂರು ವಿವಿ ಮಾಜಿ ಕುಲಪತಿಗೆ ಜಾಮೀನು
ಮಹಿಳೆ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನ ಕೊಳಗಾಗಿದೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊಫೆಸರ್ ಬಿ ಸಿ ಮೈಲಾರಪ್ಪ ಅವರಿಗೆ ಶುಕ್ರವಾರ ಬೆಂಗಳೂರಿನ ಸ್ಥಳಿಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಹಿಳೆಯ ದೂರಿನ ಮೇರೆಗೆ ಬಸವೇಶ್ವರನಗರ ಠಾಣಾಪೂರಿತರು ಶುಕ್ರವಾರ ಬೆಳಗ್ಗೆ ಬಂಧಿಸಿದ್ದರು, ಬಂಧನಕ್ಕೂ ಮುನ್ನವೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರಿಂದ ಸಂಜೆ ಹೊತ್ತಿಗೆ ಜಾಮೀನು ದೊರೆತಿದೆ. ಅಕ್ಟೋಬರ್ ಒಂಬತ್ತರಂದು 37 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು ತನಿಖೆಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಸಾಕ್ಷರಗಳು ಲಭಿಸಿದ್ದವು ಎಂದು ವರದಿಯಾಗಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
