ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
29-11-2025
ತುಮಕೂರು ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಉನ್ನತ ಶಿಕ್ಷಣ ಅಭಿವೃದ್ಧಿಗೆ ಅವಕಾಶ
ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ (PMUCSA) ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸಚಿವ ಸಂಪುಟವು 20 ಕೋಟಿ ರೂ. ವೆಚ್ಚದ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಸಭೆಯ ನಂತರ ಕಾನೂನು ಮತ್ತು ನ್ಯಾಯ ಸಚಿವ ಎಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಅದರಲ್ಲಿ ಕಟ್ಟಡ ಕಾಮಗಾರಿ ₹17.40 ಕೋಟಿ, ಉಪಕರಣಗಳ ಖರೀದಿ ₹2.10 ಕೋಟಿ, ಮತ್ತು ಲಘು ಪರಿಕರಗಳಿಗೆ ₹20 ಲಕ್ಷ ಹಂಚಿಕೆಯಾಗಿದ್ದು, ವಿಶ್ವವಿದ್ಯಾಲಯದ ಸೌಕರ್ಯ ಮತ್ತು ಶಿಕ್ಷಣದ ಮಟ್ಟವನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹೂಡಿಕೆ ಮೂಲಕ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪರಿಸರ ಸುಧಾರಣೆ, ನವೀಕೃತ ಲ್ಯಾಬ್ ಉಪಕರಣಗಳು ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು ವೃದ್ಧಿಸುವ ಯೋಜನೆಯಾಗಿದೆ.
