ವರದಿಗಾರರು :
ನಾ.ಅಶ್ವಥ್ ಕುಮಾರ್ ||
ಸ್ಥಳ :
ಚಾಮರಾಜನಗರ
ವರದಿ ದಿನಾಂಕ :
12-11-2025
ದೇವಾಲಯದ ಹುಂಡಿ ಕಳವು: ಕಳ್ಳರ ಪಾಲಾದ ನಂಬಿಕೆಯ ಹಣ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚನ್ನಾಂಜಯ್ಯನ ಹುಂಡಿ ಹಾಗೂ ಯಡಹುಂಡಿ ಗ್ರಾಮದ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ದೇವಾಲಯದ ಹುಂಡಿಯಲ್ಲಿದ್ದ ಹಣ ಕಳ್ಳರ ಪಾಲಾಗಿದೆ.
ಮಂಗಳವಾರ ರಾತ್ರಿ ನಡೆದ ಈ ಕಳವು ಬೆಳಗ್ಗೆ ಗ್ರಾಮಸ್ಥರು ದೇವಾಲಯಕ್ಕೆ ಬಂದಾಗ ಬಾಗಿಲಿನ ಬೀಗ ಒಡೆದಿರುವುದು ಕಂಡುಬಂದಿದೆ. ಒಳಗೆ ಪ್ರವೇಶಿಸಿದಾಗ ದೇವಾಲಯದ ಹುಂಡಿ ಕಾಣೆಯಾಗಿದ್ದು, ನಂತರ ದೂರದಲ್ಲೆ ಬೀಸಾಡಲ್ಪಟ್ಟ ಹುಂಡಿ ಪತ್ತೆಯಾಗಿದೆ. ಆದರೆ ಅದರೊಳಗಿದ್ದ ಹಣವನ್ನು ಕಳ್ಳರು ಕದ್ದೊಯ್ದಿದ್ದಾರೆ.
ದೇವಾಲಯದ ಹುಂಡಿಯಲ್ಲಿ ಸುಮಾರು ಆರು ರಿಂದ ಏಳು ತಿಂಗಳಿನಿಂದ ಸಂಗ್ರಹವಾಗಿದ್ದ ದೇಣಿಗೆ ಹಣ ಕಳ್ಳತನವಾಗಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಈ ಬಗ್ಗೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮಸ್ಥರು ಮಾತನಾಡಿ, “ಗ್ರಾಮಾಂತರ ಪ್ರದೇಶಗಳಲ್ಲಿ ರಾತ್ರಿ ವೇಳೆ ಪೊಲೀಸರ ಗಸ್ತು ಹೆಚ್ಚಿಸಿದರೆ ಇಂತಹ ಕಳ್ಳತನ ಪ್ರಕರಣಗಳನ್ನು ತಡೆಹಿಡಿಯಬಹುದು” ಎಂದು ಒತ್ತಾಯಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
