ವರದಿಗಾರರು :
ನಾ.ಅಶ್ವಥ್ ಕುಮಾರ್ ||
ಸ್ಥಳ :
ಚಾಮರಾಜನಗರ
ವರದಿ ದಿನಾಂಕ :
19-11-2025
ಅರಣ್ಯ ಪ್ರದೇಶದಲ್ಲಿ ಆನೆಯ ದಾಳಿ: 70 ವರ್ಷದ ಕೇತೇಗೌಡ ಮೃತ
ಚಾಮರಾಜನಗರ: ಹನೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ ವೃದ್ಧ ವ್ಯಕ್ತಿಯೊಬ್ಬರು ಆನೆಯ ದಾಳಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಪಿ.ಜಿ. ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಹಿರಿಯ ಮುಖಂಡ ಶಿಕಾರಿ ಕೇತೇಗೌಡ (70) ಎಂದು ಗುರುತಿಸಲಾಗಿದೆ. ಅವರು ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ಒಡೆಯರಪಾಳ್ಯ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಲೂರು ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಆನೆಯ ದಾಳಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಪ್ರಮೋದ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದರು. ಘಟನೆ ನಡೆದ ಸ್ಥಳದಿಂದ ಅಲ್ಪ ದೂರದಲ್ಲಿ ಆನೆ ನಿಂತಿರುವುದು ಸಿಬ್ಬಂದಿಗಳಿಗೆ ಗೋಚರಿಸಿದ ಹಿನ್ನೆಲೆಯಲ್ಲಿ ತಂಡವು ಆನೆಯನ್ನು ಕಾಡಿನ ಆಳಕ್ಕೆ ಓಡಿಸುವಲ್ಲಿ ಯಶಸ್ವಿಯಾಯಿತು.
ಘಟನೆಯಿಂದ ಸ್ಥಳೀಯರಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಈ ಪ್ರದೇಶದಲ್ಲಿ ನಿಗಾವಹಿಸುವ ಕ್ರಮಗಳನ್ನು ಕೈಗೊಂಡಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
