ವರದಿಗಾರರು :
ರಮೇಶ್ ಅಂಗಡಿ, ||
ಸ್ಥಳ :
ಬಾಗಲಕೋಟೆ
ವರದಿ ದಿನಾಂಕ :
01-11-2025
ಮೇಟಿ ಅವರ ಆರೋಗ್ಯ ವಿಚಾರಿಸಿದ ಸಚಿವ ಆರ್.ಬಿ. ತಿಮ್ಮಾಪೂರ ಶೀಘ್ರ ಗುಣಮುಖರಾಗಲಿ ಎಂದು ಹಾರೈಕೆ
ಬೆಂಗಳೂರು, ಅ. 31 ಬೆಂಗಳೂರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಹಾಗೂ ಬಾಗಲಕೋಟೆ ಜಿಲ್ಲೆಯ ಹಿರಿಯ ಶಾಸಕ ಹೆಚ್.ವೈ. ಮೇಟಿ ಅವರನ್ನು ಅಬಕಾರಿ ಸಚಿವ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಸಚಿವ ತಿಮ್ಮಾಪೂರ ಅವರು ಮೇಟಿ ಅವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂಬ ಹಾರೈಕೆ ವ್ಯಕ್ತಪಡಿಸಿದರು. “ಹೆಚ್.ವೈ. ಮೇಟಿ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ. ಅವರ ಆರೋಗ್ಯ ಶೀಘ್ರ ಸುಧಾರಣೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದೇವೆ. ವೈದ್ಯರ ಚಿಕಿತ್ಸೆಯೊಂದಿಗೆ ಅವರ ಶರೀರ ಸಹಕರಿಸಿದರೆ ಬೇಗ ಗುಣವಾಗುವ ವಿಶ್ವಾಸವಿದೆ” ಎಂದು ಅವರು ಹೇಳಿದರು.
ತಿಮ್ಮಾಪೂರ ಅವರು ವೈದ್ಯರೊಂದಿಗೆ ಮಾತುಕತೆ ನಡೆಸಿ, ಅಗತ್ಯ ಸೌಲಭ್ಯಗಳ ಖಾತರಿಯನ್ನು ಪಡೆದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಕಲ್ಮೇಶ್ ಸಾರವಾಡ್, ವಕೀಲ ಉದಯಸಿಂಗ ಪಡತಾರೆ ಹಾಗೂ ಹಲವಾರು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
