ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
29-10-2025
ಔರಾದ್: ಕನ್ನಡ ನಾಮಫಲಕ ಕಡ್ಡಾಯ – ತಹಶೀಲ್ದಾರ್ ಎಚ್ಚರಿಕೆ
ಔರಾದ್ – ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ತಹಶೀಲ್ದಾರ್ ಮಹೇಶ್ ಪಾಟೀಲ್ ಮಂಗಳವಾರ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಸೂಚಿಸಿದರು. ಅನ್ಯ ಭಾಷೆಯ ಫಲಕಗಳನ್ನು ತೆರವುಗೊಳಿಸುವಂತೆ ಅವರು ಸೂಚನೆ ನೀಡಿದರು. ಸರ್ಕಾರದ ಆದೇಶದ ಪ್ರಕಾರ ಅಂಗಡಿಗಳ ನಾಮಫಲಕದಲ್ಲಿ 60% ಕನ್ನಡದಲ್ಲಿ ಇರಬೇಕು ಎಂಬ ನಿಯಮವನ್ನು ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಚ್ಚರಿಸಿದರು. ಪಪಂ ಮುಖ್ಯಾಧಿಕಾರಿಗಳಿಗೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
