
ಲೈವ್ ಟಿವಿ ನ್ಯೂಸ್

ದಿನಾಂಕ : 14-04-2025
ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ !
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್
ವರದಿ ಸ್ಥಳ :ಬೆಂಗಳೂರು
ಒಟ್ಟು ಓದುಗರ ಸಂಖ್ಯೆ : 7742+
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಸೋಮವಾರ ಮತ್ತೆ ಕೊಲೆ ಬೆದರಿಕೆ ಸಂದೇಶ ಬಂದಿದೆ. ವಿಷಯ ತಿಳಿದು ನಟನ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದಾರೆ.
ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಬೆದರಿಕೆಯ ಹೊಣೆಯನ್ನೂ ಯಾರೂ ಹೊತ್ತುಕೊಂಡಿಲ್ಲ. ಸಲ್ಮಾನ್ ಖಾನ್ ಅವರಾಗಲಿ, ಅವರ ಕುಟುಂಬಸ್ಥರಾಗಲಿ ಯಾವುದೇ ಪ್ರತಿಕ್ರಿಯೆ ಸಹ ನೀಡಿಲ್ಲ ಎಂದು ವರದಿಗಳು ತಿಳಿಸಿವೆ.
ಈ ಹಿಂದೆಯೂ ಸಲ್ಮಾನ್‌ಗೆ ಹಲವು ಬಾರಿ ಬೆದರಿಕೆಗಳು ಬಂದಿವೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆಗಳು ಬಂದಿವೆ. ಇದರ ಹೊರತಾಗಿಯೂ ನಟ ಸಿನಿಮಾ ಶೂಟಿಂಗ್‌ಗಳಲ್ಲಿ ಬ್ಯುಸಿಯಾಗಿದ್ದಾರೆ.
ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ : ಕಳೆದ ವರ್ಷ ನಟನ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೆಳಗ್ಗಿನ ಜಾವ ಸುಮಾರು 5 ಗಂಟೆ ವೇಳೆಯಲ್ಲಿ ದಾಳಿ ನಡೆದಿತ್ತು. ದಾಳಿಕೋರರು ಒಟ್ಟು 5 ಸುತ್ತು ಗುಂಡು ಹಾರಿಸಿದ್ದರು. ಈ ಪೈಕಿ ಸಲ್ಮಾನ್ ಮನೆ ಕಡೆಗೆ 4 ಗುಂಡು ಹಾರಿಸಲಾಗಿತ್ತು, 1 ಗುಂಡು ಗುಂಡು ನೆಲಕ್ಕೆ ಬಿದ್ದಿತ್ತು. 7.65 ಎಂಎಂ ಬೋರ್ ಪಿಸ್ತೂಲ್‌ನಿಂದ ಈ ಗುಂಡಿನ ದಾಳಿ ನಡೆಸಲಾಗಿತ್ತು. ಅದೃಷವಶಾತ್ ಸಲ್ಮಾನ್ ಖಾನ್ ಅಂದು ಮನೆಯಲ್ಲೇ ಇದ್ದರೂ ಯಾವುದೇ ಅಪಾಯ ಸಂಭವಿಸಿರಲಿಲ್ಲ ಎಂಬಹುದು ಗಮನಾರ್ಹ.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















