ವರದಿಗಾರರು :
ಪಾಟೀಲ್ ಶಿವರಾಜ, ||
ಸ್ಥಳ :
ವಿಜಯನಗರ
ವರದಿ ದಿನಾಂಕ :
27-11-2025
ಮಕ್ಕಳ ಹಕ್ಕುಗಳ ಗ್ರಾಮಸಭೆಯ ಪೂರ್ವಭಾವಿ ಸಭೆ
27-11-2025, ಗುರುವಾರ – ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಕಲ್ ತಾವರಗೆರಾ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಅವರ ಅಧ್ಯಕ್ಷತೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಂಚಾಯ್ತಿ ವ್ಯಾಪ್ತಿಯ ಶಾಲಾ ಶಿಕ್ಷಕರು, ಅಂಗನವಾಡಿ ಶಿಕ್ಷಕಿಯರು ,ಆಶಾ ಕಾರ್ಯಕರ್ತೆಯರು ಭಾಗವಹಿಸಿ ಮಕ್ಕಳ ಹಕ್ಕುಗಳ ಕುರಿತ ಜಾಗೃತಿ, ರಕ್ಷಣಾ ಕ್ರಮಗಳು ಮತ್ತು ಗ್ರಾಮ ಮಟ್ಟದ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಭಾಗವಹಿಸಿದ ಸಿಬ್ಬಂದಿಗೆ ಮುಂದಿನ ಗ್ರಾಮಸಭೆಯಲ್ಲಿ ಅನುಸರಿಸಬೇಕಾದ ಕಾರ್ಯಪದ್ಧತಿ, ಮಕ್ಕಳ ಸಮಸ್ಯೆಗಳ ಗುರುತು, ಪರಿಹಾರ ಕ್ರಮಗಳು ಮತ್ತು ಇಲಾಖೆಗಳ ನಡುವಿನ ಒಳಸಮನ್ವಯದ ಬಗ್ಗೆ ಮಾರ್ಗದರ್ಶನ ನೀಡಲಾಯಿತು.
