ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
25-10-2025
ಸಂಪುಟ ಪುನರ್ ರಚನೆ,ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದ ಕೃಷ್ಣ ಬೈರೇಗೌಡ
ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರಚನೆ ವಿಚಾರಗಳು ಜೋರಾಗಿ ಚರ್ಚೆಯಾಗುತ್ತಿರುವಾಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಪಕ್ಷ ತನಗೆ ಅರ್ಹತೆಗೂ ಮೀರಿ ಆವಕಾಶಗಳನ್ನು ನೀಡಿದೆ, ಅದಕ್ಕಾಗಿ ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಆಂತರಿಕ ಕಲಹ ಜೋರಾಗಿರುವ ಸಂದರ್ಭದಲ್ಲಿ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ
