ಲೈವ್ ಟಿವಿ ನ್ಯೂಸ್

ದಿನಾಂಕ : 25-08-2025

ಕೈಗಾರಿಕಾ ನಿವೇಶನಗಳ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾನವ ಹಕ್

ವರದಿಗಾರರು : ಬಸವರಾಜ ಪೂಜಾರಿ
ವರದಿ ಸ್ಥಳ :ಬೀದರ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 44+

ಕೈಗಾರಿಕಾ ನಿವೇಶನಗಳ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿಯ ಪದಾಧಿಕಾರಿಗಳು : ಜಿಲ್ಲೆಯ ವಿವಿಧೆಡೆಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ನಿವೇಶನಗಳ ಹಂಚಿಕೆ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ ಆಗ್ರಹಿಸಿದೆ.ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದರು.ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಮಹಿಳಾ ಉದ್ಯಮ, ಕೃಷಿಗೆ ಸಂಬಂಧಿಸಿದ ನಿವೇಶನ, ಆಟೊನಗರ ನಿವೇಶನ, ಹುಮನಾಬಾದ್ ಮತ್ತು ಬಸವಕಲ್ಯಾಣ ಕೈಗಾರಿಕಾ ಪ್ರದೇಶದಲ್ಲಿಯ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಆದರೆ, ಅರ್ಜಿ ಸಲ್ಲಿಕೆಗೆ ನಿಯಮಾನುಸಾರ 30 ದಿನ ನೀಡಲಾಗಿಲ್ಲ. 16 ದಿನ ಮಾತ್ರ ಕೊಡಲಾಗಿದೆ ಎಂದು ಆಪಾದಿಸಿದರು.ಸಮಿತಿ ಈ ಹಿಂದೆ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಉದ್ಯಮದ ನಿವೇಶನ ಅರ್ಜಿ ಸಲ್ಲಿಕೆ ಅವಧಿಯನ್ನಷ್ಟೇ ವಿಸ್ತರಿಸಲಾಗಿದೆ. ಇನ್ನುಳಿದ  ನಿವೇಶನಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿಲ್ಲ ಎಂದು ದೂರಿದರು.ಅವಧಿ ಕಡಿಮೆ ಇರುವ ಕಾರಣ ಹೆಚ್ಚು ಜನರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅರ್ಜಿ ಆಹ್ವಾನ ಪ್ರಕ್ರಿಯೆಯಲ್ಲಿ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗಳಿಗೆ ಮನವಿಯನ್ನು ಸಲ್ಲಿಸಿದಾರೆ ಕಲಬುರಗಿ ವಿಭಾಗೀಯ ಅಧ್ಯಕ್ಷ ಸಂಗಮೇಶ ಬಾವಿದೊಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ವಿಶಾಲ್ ದೊಡ್ಡಿ, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಂದೀಪ್ ಕಾಂಟೆ, ಜೈ ಭೀಮ ಗರ್ಜನೆ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ದಾವಿದ್ ಹಲಗೆ, ಪುಟ್ಟು ಚತುರೆ ಗಾದಗಿ, ಸಾಹಿಲ್ ಬಹುತ್ ಇದ್ದರು.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand