
ಲೈವ್ ಟಿವಿ ನ್ಯೂಸ್

ದಿನಾಂಕ : 21-03-2025
ಮಂಡ್ಯದ ಗಂಡು ಸಿನಿಮಾ ನಿರ್ದೇಶಕ ಎಟಿ ರಘು ನಿಧನ !
ವರದಿಗಾರರು : ಮೀನಾಕ್ಷಿ
ವರದಿ ಸ್ಥಳ : ಬೆಂಗಳೂರು
ಒಟ್ಟು ಓದುಗರ ಸಂಖ್ಯೆ : 18166+
ಬೆಂಗಳೂರು: `ಮಂಡ್ಯದ ಗಂಡು’ ಸಿನಿಮಾ ನಿರ್ದೇಶಿಸಿದ್ದ ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಎಟಿ ರಘು ಗುರುವಾರ ರಾತ್ರಿ ನಿಧನರಾಗಿದ್ದಾರೆ. 76 ವರ್ಷದ ರಘು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಜೊತೆಗೆ ಡಯಾಲಿಸಿಸ್ ಮಾಡಿಸಿಕೊಳುತ್ತಿದ್ದರು. ಗುರುವಾರ ರಾತ್ರಿ 9:20ರ ಸುಮಾರಿಗೆ ಕೊನೆಯುಸಿರೆಳೆದಿದ್ದು, ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಸದ್ಯ ಆರ್ಟಿ ನಗರದ ಮಠದಹಳ್ಳಿಯಲ್ಲಿ ಪಾರ್ಥಿವ ಶರೀರ ಇಡಲಾಗಿದ್ದು, ಇಂದು ಮದ್ಯಾಹ್ನ 2-3 ಗಂಟೆಯೊಳಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ .ಕನ್ನಡ ಚಿತ್ರರಂಗದಲ್ಲಿ ಬರಹಗಾರ ಹಾಗೂ ಖ್ಯಾತ ನಿರ್ದೇಶಕರಾಗಿದ್ದ ಇವರು, ಸಾಹಸ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳುತ್ತಿದ್ದರು. `ಮಂಡ್ಯದ ಗಂಡು’ ಸಿನಿಮಾ ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ನಿರ್ದೇಶಿಸಿದ್ದರು. ಇನ್ನೂ ರೆಬೆಲ್ ಸ್ಟಾರ್ ಅಂಬರೀಶ್ ನಟನೆಯ 27 ಸಿನಿಮಾಗಳನ್ನು ನಿರ್ದೇಶಿದ್ದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















